Home ಟಾಪ್ ಸುದ್ದಿಗಳು ಲಖಿಂಪುರ್ ಹಿಂಸಾಚಾರ: ಮೃತ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ಘೋಷಿಸಿದ ಪಂಜಾಬ್, ಛತ್ತೀಸ್...

ಲಖಿಂಪುರ್ ಹಿಂಸಾಚಾರ: ಮೃತ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ಘೋಷಿಸಿದ ಪಂಜಾಬ್, ಛತ್ತೀಸ್ ಗಢ ಸರ್ಕಾರ

ಲಕ್ನೋ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ರೈತರು ಮತ್ತು ಪತ್ರಕರ್ತನ ಸಂತ್ರಸ್ತ ಕುಟುಂಬಗಳಿಗೆ ಛತ್ತೀಸ್ ಗಢ ಹಾಗೂ ಪಂಜಾಬ್ ಸರ್ಕಾರಗಳು ತಲಾ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿವೆ.


ಹಿಂಸಾಚಾರದ ವೇಳೆ ಸಾವಿಗೀಡಾಗಿರುವ ನಾಲ್ವರು ರೈತರು ಹಾಗೂ ಓರ್ವ ಪತ್ರಕರ್ತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿವೆ.

ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚನ್ನಿ ಮತ್ತು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ರಾಹುಲ್ ಗಾಂಧಿ ಮಧ್ಯಾಹ್ನ ಲಕ್ನೋ ವಿಮಾನ ನಿಲ್ದಾಣವನ್ನು ತಲುಪುತ್ತಿದ್ದಂತೆ, ಇಬ್ಬರೂ ಮುಖ್ಯಮಂತ್ರಿಗಳು ಲಖಿಂಪುರ್ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಮತ್ತು ಪತ್ರಕರ್ತರ ಕುಟುಂಬಗಳಿಗೆ ತಲಾ 50 ಲಕ್ಷ ಪರಿಹಾರ ಘೋಷಿಸಿದರು .

Join Whatsapp
Exit mobile version