Home ಟಾಪ್ ಸುದ್ದಿಗಳು ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್

ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್

ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಮ್ಮ ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


48 ವರ್ಷದ ಭಗವಂತ್ ಮಾನ್ ಅವರು 32ರ ಹರೆಯದ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಮದುವೆಯಾಗಿದ್ದಾರೆ. ಇವರು ಕೆಲವು ವರ್ಷಗಳಿಂದ ಪರಿಚಿತರಾಗಿದ್ದರು ಎಂದು ತಿಳಿದು ಬಂದಿದೆ.


ಭಗವಂತ್ ಮಾನ್ ಅವರು ಚಂಡೀಗಢದ ತಮ್ಮ ಮನೆಯಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಮದುವೆಯಾದರು.
ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ರಾಘವ್ ಚಡ್ಡಾ ಅವರು ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಭಗವಂತ ಮಾನ್ ಅವರು ಆರು ವರುಷಗಳ ಹಿಂದೆ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದರು. ಅವರು ಮಕ್ಕಳು ಸಮೇತ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಮಕ್ಕಳು ಮಾತ್ರ ಮಾನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಬಂದಿದ್ದರು.

Join Whatsapp
Exit mobile version