ಪ್ರಧಾನಿ ಭೇಟಿಯಾದ ಪಂಜಾಬ್‌ ಮುಖ್ಯಮಂತ್ರಿ ಚರಣ್‌ ಜಿತ್ ಚನ್ನಿ

Prasthutha|

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಚನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಚನ್ನಿ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. 

- Advertisement -

ಮೋದಿ ಭೇಟಿ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ, ಹಾಗೇ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿರುವೆ ಎಂದರು.

ಪಂಜಾಬ್‌ ನಲ್ಲಿ ಭತ್ತ ಖರೀದಿ ಪ್ರಕ್ರಿಯೆಯು ಅಕ್ಟೋಬರ್‌ 1ರಂದು ಆರಂಭವಾಗುತ್ತದೆ. ಆದರೆ, ಈ ವರ್ಷ ಕೇಂದ್ರ ಸರ್ಕಾರವು ಅಕ್ಟೋಬರ್‌ 10ರಿಂದ ಆರಂಭಿಸಲು ನಿರ್ಧರಿಸಿದೆ. ಕೂಡಲೇ ಖರೀದಿ ಪ್ರಕ್ರಿಯೆ ಶುರು ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು.

Join Whatsapp