ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರಲು ಬಯಸಿದ್ದರು ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಭಗವಂತ ಮಾನ್ ಸಾಹೇಬರು ನನ್ನ ಬಳಿಗೆ ಬಂದಿದ್ದರು. ಕಾಂಗ್ರೆಸ್ ಸೇರಲು ಬಯಸಿದ್ದ ಅವರು ನಿಮ್ಮ ಜೊತೆ ಉಪನಾಯಕನಾಗಿ ಕೆಲಸ ಮಾಡಲು ಸಿದ್ಧ ಎಂದು ಹೇಳಿದ್ದರು. ಅವರು ನನ್ನ ಭೇಟಿಯಾದ ಸ್ಥಳವನ್ನು ಸಹ ಹೇಳಬಲ್ಲೇ ಎಂದು ಸಿಧು ಹೇಳಿದ್ದಾರೆ.
ಬಿಜೆಪಿಗೆ ಸೇರಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.