Home ಟಾಪ್ ಸುದ್ದಿಗಳು ಪಂಜಾಬ್: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್

ಪಂಜಾಬ್: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್

ಅಮೃತಸರ: ಪಂಜಾಬ್’ನ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಂಸದ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾದ ಮಾನ್ ಅವರು ಪಾರ್ಲಿಮೆಂಟ್ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ.

ಪ್ರಸಕ್ತ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಪಂಜಾಬ್’ನ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಮಾರ್ಚ್ 16 ರಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಸ್ವಗ್ರಾಮದಲ್ಲಿ 17 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿಯಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಸುಮಾರು 3 ಕೋಟಿ ಜನರನ್ನು ಆಹ್ವಾನಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್ ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಅದ್ದೂರಿಯಾಗಿ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

Join Whatsapp
Exit mobile version