Home ಟಾಪ್ ಸುದ್ದಿಗಳು ಪಂಜಾಬ್ | ಉಭಯ ಗುಂಪುಗಳ ನಡುವೆ ಘರ್ಷಣೆ; ಗಾಳಿಯಲ್ಲಿ ಗುಂಡು

ಪಂಜಾಬ್ | ಉಭಯ ಗುಂಪುಗಳ ನಡುವೆ ಘರ್ಷಣೆ; ಗಾಳಿಯಲ್ಲಿ ಗುಂಡು

ಪಾಟಿಯಾಲ: ಪಂಜಾಬ್ ನ ಪಾಟಿಯಾಲದ ಕೆಲವು ಭಾಗದಲ್ಲಿ ಖಾಲಿಸ್ತಾನ ವಿರೋಧಿ ಪ್ರತಿಭಟನಾ ವೇಳೆ ಎರಡು ತಂಡಗಳ ನಡುವೆ ಉಂಟಾದ ಘರ್ಷಣೆಯಿಂದಾಗಿ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಉಭಯ ತಂಡಗಳ ಉಂಟಾದ ಈ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಪಂಜಾಬ್ ಮುಖ್ಯಮಂತ್ರಿ ಭವವಂತ್ ಮಾನ್, ಈ ಘಟನೆ ದುರದೃಷ್ಟಕರ ಮತ್ತು ಸರ್ಕಾರ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಘರ್ಷಣೆಗೆ ಸಂಬಂಧಿಸಿದಂತೆ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ. ಈ ಪ್ರದೇಶದಲ್ಲಿ ಶಾಂತಿಯನ್ನು ಮರು ಸ್ಥಾಪಿಸಲಾಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ಶಾಂತಿ ಕದಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಪಂಜಾಬ್ ನ ಶಾಂತಿ ಮತ್ತು ಸೌಹಾರ್ದತೆ ಅತ್ಯಂತ ಮಹತ್ವದ್ದಾಗಿದೆ ಎಂದು ಮಾನ್ ತಿಳಿಸಿದ್ದಾರೆ.

ಪೊಲೀಸರ ಅನುಮತಿ ಪಡೆಯದೆ ಶಿವಸೇನೆ ಮೆರವಣಿಗೆಯನ್ನು ಆಯೋಜಿಸಿತ್ತು ಎಂದು ಮೂಲಗಳಿಂದ ತಿಳಿದು ಬಂದಿವೆ.

Join Whatsapp
Exit mobile version