ಪಂಜಾಬ್| ಕಾಂಗ್ರೆಸ್‌ ಘಟಕ ಅಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ

Prasthutha|

ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದರು.

- Advertisement -

‘ಕಾಂಗ್ರೆಸ್ ಅಧ್ಯಕ್ಷರು ಬಯಸಿದಂತೆ ನಾನು ರಾಜೀನಾಮೆ ನೀಡಿದ್ದೇನೆ’ ಎಂದು ಟ್ವೀಟ್ ಮಾಡಿರುವ ಸಿಧು , ರಾಜೀನಾಮೆ ಪತ್ರದ ಪ್ರತಿಯನ್ನೂ ಪೋಸ್ಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌ ಘಟಕಗಳ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

- Advertisement -

ಪಕ್ಷದ ಪ್ರಾದೇಶಿಕ ಸಮಿತಿಗಳ ಮರು ರಚನೆಗೆ ಅನುಕೂಲವಾಗುವಂತೆ ಸೋನಿಯಾ ಗಾಂಧಿ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

Join Whatsapp