Home ಟಾಪ್ ಸುದ್ದಿಗಳು ಪಂಜಾಬ್‌: ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧ ವಿಸ್ತರಣೆ

ಪಂಜಾಬ್‌: ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧ ವಿಸ್ತರಣೆ

ಪಂಜಾಬ್: ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಪಂಜಾಬ್​ನ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳ ನಿಷೇಧವನ್ನು ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದೆ ಎಂದು ವರದಿಯಾಗಿದೆ.

ರೈತರ ‘ದೆಹಲಿ ಚಲೋ’ ಮೆರವಣಿಗೆ ಹಿನ್ನೆಲೆಯಲ್ಲಿ ಫೆಬ್ರವರಿ 12ರಿಂದ 16ರವರೆಗೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ವಿಸ್ತರಣೆಯನ್ನು ಫೆ.24ರವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ.

ಇದೇ ರೀತಿ ಹರಿಯಾಣ ಸರ್ಕಾರವು ಕೂಡ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್​ಎಂಎಸ್​ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

Join Whatsapp
Exit mobile version