ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಪಂಜಾಬ್ ಕಿಂಗ್ಸ್ ಏಳು ವಿಕೆಟ್‌ಗಳ ಭರ್ಜರಿ ಜಯ

Prasthutha|

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡ ಏಳು ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದೆ.ಇದರೊಂದಿಗೆ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು.

ಸುಲಭ ಸವಾಲ್ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತ 17.5 ಓವರ್‌ಗಳಲ್ಲಿಯೇ ಮೂರು ವಿಕೆಟ್ ಕಳೆದುಕೊಂಡು 163 ರನ್ ದಾಖಲಿಸುವ ಮೂಲಕ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿದೆ.

- Advertisement -

ಚೆನ್ನೈಯನ್ನು ಸೋಲಿಸುವ ಮೂಲಕ ಪಂಜಾಬ್ ಸತತ ಐದು ಬಾರಿ ಸೋಲಿಸಿದಂತಾಯಿತು.

ಪಂಜಾಬ್ ಪರ ಬ್ಯಾಟಿಂಗ್‌ನಲ್ಲಿ ಜಾನಿ ಬೈರ್​ಸ್ಟೋವ್ 46 ರನ್​(30 ಎಸೆತ, 7 ಬೌಂಡರಿ, 1 ಸಿಕ್ಸ್) ಮತ್ತು ಬೌಲಿಂಗ್‌ನಲ್ಲಿ ರಾಹುಲ್​ ಚಹಾರ್​ (16ಕ್ಕೆ 2 ವಿಕೆಟ್​), ಹರ್‌ಪ್ರೀತ್ ಬ್ರಾರ್ (17 ರನ್ ನೀಡಿ 2) ವಿಕೆಟ್ ಪಂಜಾಬ್​ ಗೆಲುವಿಗೆ ಕಾರಣರಾದರು.

ಚೆನ್ನೈ ಪರ ಬೌಲಿಂಗ್‌ನಲ್ಲಿ ಶಿವಂ ದುಬೆ, ರಿಚರ್ಡ್‌ ಗ್ಲೀಸನ್ ಹಾಗೂ ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಗಳಿಸಿದರು.

Join Whatsapp
Exit mobile version