ಪಂಜಾಬ್ NDPS ಪ್ರಕರಣ: ಶಿರೋಮಣಿ ಅಕಾಲಿದಳದ ಶಾಸಕ ಮಜಿಥಿಯಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

Prasthutha|

ಚಂಡೀಗಢ: 2021ರ ಡಿಸೆಂಬರ್ ನಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ ಸ್ಟೆನ್ಸಸ್ (NDPS) ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೋಮಣಿ ಅಕಾಲಿದಳದ ಶಾಸಕ ವಿಕ್ರಮ್ ಸಿಂಗ್ ಮಜಿಥಿಯಾ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಸ್ತುತ ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮಜಿಥಿಯಾ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ, ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

Join Whatsapp