Home ಟಾಪ್ ಸುದ್ದಿಗಳು ಪಂಜಾಬ್ NDPS ಪ್ರಕರಣ: ಶಿರೋಮಣಿ ಅಕಾಲಿದಳದ ಶಾಸಕ ಮಜಿಥಿಯಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಪಂಜಾಬ್ NDPS ಪ್ರಕರಣ: ಶಿರೋಮಣಿ ಅಕಾಲಿದಳದ ಶಾಸಕ ಮಜಿಥಿಯಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಚಂಡೀಗಢ: 2021ರ ಡಿಸೆಂಬರ್ ನಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ ಸ್ಟೆನ್ಸಸ್ (NDPS) ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೋಮಣಿ ಅಕಾಲಿದಳದ ಶಾಸಕ ವಿಕ್ರಮ್ ಸಿಂಗ್ ಮಜಿಥಿಯಾ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರಸ್ತುತ ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮಜಿಥಿಯಾ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ, ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

Join Whatsapp
Exit mobile version