ಪಂಜಾಬ್‌| ಪ್ರಕರಣ ಇತ್ಯರ್ಥಗೊಳಿಸಲು ಅಧಿಕಾರಿಗೆ ಹಣದ ಆಮಿಷ; ಮಾಜಿ ಸಚಿವನ ಬಂಧನ

Prasthutha|

ಚಂಡೀಗಢ: ತನ್ನ ವಿರುದ್ಧದ ಪ್ರಕರಣವನ್ನು ಇತ್ಯರ್ಥಗೊಳಿಸಲು ಅಧಿಕಾರಿಯೊಬ್ಬರಿಗೆ 50 ಲಕ್ಷ ರೂ ಆಮಿಷ ಒಡ್ಡಿರುವ ಆರೋಪದ ಮೇಲೆ ಪಂಜಾಬ್‌ನ ಮಾಜಿ ಕೈಗಾರಿಕಾ ಸಚಿವ ಸುಂದರ್ ಶ್ಯಾಮ್ ಅರೋರಾ ಅವರನ್ನು ಬಂಧಿಸಲಾಗಿದೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಪಂಜಾಬ್ ವಿಜಿಲೆನ್ಸ್ ಬ್ಯೂರೋದ ಮುಖ್ಯ ನಿರ್ದೇಶಕ ವರೀಂದರ್ ಕುಮಾರ್, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಅರೋರಾ ಅವರು ಪ್ರಕರಣದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ ಮನಮೋಹನ್ ಶರ್ಮಾ ಅವರಿಗೆ ₹1 ಕೋಟಿ ಆಮಿಷ ಒಡ್ಡಿದರು. ಮೊದಲ ಕಂತಿನ ಭಾಗವಾಗಿ ₹50 ಲಕ್ಷ ನಗದು ಹೊಂದಿರುವ ಬ್ಯಾಗ್ ಅಧಿಕಾರಿಗೆ ಹಸ್ತಾಂತರಿಸುವ ಬಗ್ಗೆ ಖಚಿತ ಮಾಹಿಯನ್ನು ಆಧರಿಸಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

Join Whatsapp