ಪಂಜಾಬ್: ಚುನಾವಣಾ ಪ್ರಚಾರಕ್ಕೆ ಜನವರಿ 3ರಂದು ರಾಹುಲ್ ಗಾಂಧಿ ಚಾಲನೆ

Prasthutha|

ನವದೆಹಲಿ: ಅಧಿಕಾರದಲ್ಲಿದ್ದರೂ, ಆಂತರಿಕ ಕಲಹದಿಂದ ಕಂಗೆಟ್ಟಿರುವ ಪಂಜಾಬ್’ನಲ್ಲಿ, ಜನವರಿ 3ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಜನವರಿ 3ರಂದು ಮೊಗ ಎಂಬಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.

- Advertisement -

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಬೇಕಾರುವ ಕಾಂಗ್ರೆಸ್, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ, ಸಾಮೂಹಿಕ ನಾಯಕತ್ವ ಫಾರ್ಮುಲಾದ ಅಡಿಯಲ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜಾತಿ ಸಮೀಕರಣವನ್ನು ಮುಂದಿಟ್ಟುಕೊಂಡು ಸಿಎಂ ಸ್ಥಾನಕ್ಕೆ ಯಾರ ಹೆಸರನ್ನೂ ಘೋಷಿಸದೇ ಇರಲು ತೀರ್ಮಾನಿಸಲಾಗಿದೆ. 117 ಸ್ಥಾನಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಗೊಳಿಸಲು ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಸದ್ಯದಲ್ಲೇ ಸಭೆ ಸೇರಲಿದೆ.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪಂಜಾಬ್’ನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರನ್’ಜಿತ್ ಸಿಂಗ್ ಚೆನ್ನಿ ಅವರು ಕಳೆದ ಸೆಪ್ಟಂಬರ್’ನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಮತ್ತೊಂದೆಡೆ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಕ್ಷವನ್ನು ತ್ಯಜಿಸಿದ್ದರೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧು ಪದೇ ಪದೇ ಪಕ್ಷಕ್ಕೆ ಮುಜುಗರ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಬೇಕಾಗಿದೆ.

Join Whatsapp