ಬಿಜೆಪಿ, ಧಿಂಡ್ಸಾ ಪಕ್ಷದೊಂದಿಗೆ ಅಮರಿಂದರ್ ಸಿಂಗ್ ಮೈತ್ರಿ

Prasthutha|

ಅಮೃತಸರ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು, ಬಿಜೆಪಿ ಮತ್ತು ಅಕಾಲಿದಳ ಬಂಡಾಯ ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಘೋಷಿಸಿದ್ದಾರೆ.

- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಈ ಮೈತ್ರಿಗೆ ಮುಂದಾಗಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ವರ್ಷದ ಆರಂಭದಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೊರೆದು ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಮಾತ್ರವಲ್ಲ ಸೋಮವಾರ ಪಕ್ಷದ ಪ್ರಧಾನ ಕಚೇರಿಯನ್ನು ಚಂಢೀಗಡದಲ್ಲಿ ಉದ್ಘಾಟಿಸಿದ್ದಾರೆ.

- Advertisement -

ಮುಂದಿನ ದಿನಗಳಲ್ಲಿ ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿ ಪಕ್ಷಗಳೊಂದಿಗೆ ಚರ್ಚೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಸುದ್ದಿಗಾರರಿಗೆ ಈ ಸಂದರ್ಭದಲ್ಲಿ ತಿಳಿಸಿದರು.

ಈ ನಡುವೆ 117 ಸೀಟುಗಳಿರುವ ಪಂಜಾಬ್ ವಿಧಾನಸಭೆಗೆ 2022 ರಲ್ಲಿ ಚುನಾವಣೆ ನಡೆಯಲಿದೆ.

Join Whatsapp