ಪಂಜಾಬ್ ಚುನಾವಣೆ: ಬಿಜೆಪಿ ಪರ ಮತ ಯಾಚಿಸಿದ ಕಾಂಗ್ರೆಸ್ ಸಂಸದೆ

Prasthutha|

ಪಟಿಯಾಲ: ಪಂಜಾಬ್‌ನ ಪಟಿಯಾಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ತಮ್ಮ ಪತಿ, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪರ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಮತ ಯಾಚಿಸಿದರು.

- Advertisement -

ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ತೀವ್ರ ಬಿಕ್ಕಟ್ಟಿನ ನಂತರ ಕಳೆದ ವರ್ಷ ಕಾಂಗ್ರೆಸ್ ಹೈಕಮಾಂಡ್ ಅಮರಿಂದರ್ ಸಿಂಗ್ ಅವರನ್ನು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿತ್ತು. ನಂತರ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಕಟ್ಟಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್‌ ಸಿಂಗ್ ಗಾಗಿ ಆಯೋಜಿಸಲಾಗಿದ್ದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ “ಅಮರಿಂದರ್ ಸಿಂಗ್ ನೇತೃತ್ವದ ಪಿಎಲ್‌ಸಿ, ಬಿಜೆಪಿ ಮತ್ತು ಎಸ್‌ಎಡಿ ಮೈತ್ರಿ ಪಕ್ಷಗಳು ಚುನಾವಣೆ ಎದುರಿಸುತ್ತಿವೆ.ಮಾಜಿ ಮುಖ್ಯಮಂತ್ರಿ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ಪಟಿಯಾಲದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.  ನಿಮ್ಮ ಕುಟುಂಬದ ಸದಸ್ಯರಾಗಿ ಅಮರಿಂದರ್ ಸಿಂಗ್ ಪರ ಮತ ಕೇಳಲು ನಿಮ್ಮ ಬಳಿಗೆ ಬಂದಿದ್ದೇನೆ” ಎಂದು ಹೇಳಿದರು.

- Advertisement -

ಕಾಂಗ್ರೆಸ್ ಪರ ಪ್ರಚಾರದಿಂದ ದೂರ ಉಳಿದಿರುವ ಪ್ರಣೀತ್ ಕೌರ್ ಅವರ ಈ ನಡೆ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.



Join Whatsapp