ಪಂಜಾಬ್: ಸಿಖ್ಖ್ ಇತಿಹಾಸ ತಿರುಚಿದ ಆರೋಪ; 12ನೇ ತರಗತಿಯ 3 ಪುಸ್ತಕಗಳು ನಿಷೇಧ

Prasthutha|

ಚಂಡೀಗಢ: ಸಿಖ್ಖ್ ಇತಿಹಾಸವನ್ನು ವಿರೂಪಗೊಳಿಸಿದ ಆರೋಪದಲ್ಲಿ ಪಂಜಾಬ್ ಶಾಲಾ ಶಿಕ್ಷಣ ಮಂಡಳಿ, ಮೂರು ಪುಸ್ತಕಗಳನ್ನು ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಈ ಬಗ್ಗೆ ಮಾತನಾಡಿರುವ ಪಂಜಾಬ್ ಶಿಕ್ಷಣ ಸಚಿವ ಗುರ್ಮೀತ್ ಸಿಂಗ್ ಮೀತ್,  ಸಿಖ್ಖ್ ಇತಿಹಾಸಕ್ಕೆ ಸಂಬಂಧಿಸಿದ ಸತ್ಯಾಂಶಗಳನ್ನು ವಿರೂಪಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೇಖಕರು ಮತ್ತು ಪ್ರಕಾಶಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

” ಸಿಖ್ಖ್ ಇತಿಹಾಸವು ಈಗಿನ ಮತ್ತು ಭವಿಷ್ಯದ ಪೀಳಿಗೆಗೆ ಅಮೂಲ್ಯವಾಗಿದೆ. ಸಿಖ್ಖ್ ಇತಿಹಾಸಕ್ಕೆ ಸಂಬಂಧಿಸಿದಂತೆ 12ನೇ ತರಗತಿಯ ಪಂಜಾಬ್ ಇತಿಹಾಸ ಕೃತಿಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಭಗವಾನ್ ಮಾನ್ ಅವರ ಸೂಚನೆಯಂತೆ, ಲೇಖಕರು/ ಪ್ರಕಾಶಕರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದ್ದು, ಈ ಪುಸ್ತಕಗಳ ಬಳಕೆಯನ್ನು ನಿಷೇಧಿಸಲಾಗಿದೆ” ಎಂದು ಹೇಳಿದ್ದಾರೆ.

- Advertisement -

ಸರ್ಕಾರದ ಮುಖ್ಯ ಉದ್ದೇಶ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಮತ್ತು ಗುರುಗಳು, ಸಿಖ್ಖ್ ಜಗತ್ತು ಮತ್ತು ಪಂಜಾಬಿನ ಇತಿಹಾಸದ ಬಗ್ಗೆ ಅರಿವು ಮೂಡಿಸುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.



Join Whatsapp