ನವದೆಹಲಿ: ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರರಿಗೆ
ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ವಿಧಾನಸಭೆಯಿಂದ ಅಂಗೀಕರಿಸಿದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರೋದಾಗಿ ಎರಡು ರಾಜ್ಯ ಸರಕಾರಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸುಪ್ರೀಂ ಗರಂ ಆಗಿ, ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ, ಚುನಾಯಿತ ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಮಸೂದೆಗಳನ್ನು ವಿಳಂಬ ಮಾಡದಂತೆ ಎರಡೂ ರಾಜ್ಯಪಾಲರನ್ನು ಒತ್ತಾಯಿಸಿದೆ. ದಯವಿಟ್ಟು ಚುನಾಯಿತ ಸಭೆಯು ಅಂಗೀಕರಿಸಿದ ಮಸೂದೆಗಳ ಹಾದಿಯನ್ನು ತಿರುಗಿಸಬೇಡಿ. ಇದು ಅತ್ಯಂತ ಗಂಭೀರ ಮತ್ತು ಕಾಳಜಿಯ ವಿಷಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಉದ್ದೇಶಪೂರ್ವಕವಾಗಿ ಮಸೂದೆಗಳನ್ನು ವಿಳಂಬ ಮಾಡುವುದು ಸರಿಯಲ್ಲ. ರಾಜ್ಯಪಾಲರು ಇದನ್ನು ಏನೆಂದು ಹೇಳುತ್ತಾರೆ? ಪಂಜಾಬ್ ಮತ್ತು ತಮಿಳುನಾಡಿನಲ್ಲಿ ನಡೆಯುತ್ತಿರೋದರ ಬಗ್ಗೆ ನಮಗೆ ತೃಪ್ತಿಯಿಲ್ಲ . ನಾವು ಸಂಸದೀಯ ಪ್ರಜಾಪ್ರಭುತ್ವವಾಗಿ ಮುಂದುವರಿಯುತ್ತಿದ್ದೇವೆಯೇ ಎಂಬ ಅನುಮಾನ ಮೂಡುತ್ತಿದೆ. ಭಾರತವು ಸ್ಥಾಪಿತ ಸಂಪ್ರದಾಯಗಳು ಮತ್ತು ವಿವಿಧತೆ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅವುಗಳನ್ನು ಅನುಸರಿಸುವ ಅಗತ್ಯವಿದೆ ಎಂದು ಪೀಠವು ಒತ್ತಿ ಹೇಳಿದೆ.