Home ಟಾಪ್ ಸುದ್ದಿಗಳು ಪಂಜಾಬ್ ವಿಕಾಸ್ ಪಾರ್ಟಿ: ಅಮರೀಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ ?

ಪಂಜಾಬ್ ವಿಕಾಸ್ ಪಾರ್ಟಿ: ಅಮರೀಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ ?

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ “ಪಂಜಾಬ್ ವಿಕಾಸ್ ಪಾರ್ಟಿ” ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಲು ಸಿದ್ಧತೆ ನಡೆಸಿದ್ದಾರೆ.

ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಅವರಿಗೆ ಅಸಮಾಧಾನವಿತ್ತು. ಇಲ್ಲಿಯವರೆಗೂ ನಾನು ಕಾಂಗ್ರೆಸ್ ನಲ್ಲಿಯೇ ಇದ್ದೇನೆ. ಆದರೆ, ಇನ್ನು ಈ ಪಕ್ಷದಲ್ಲಿ ಮುಂದುವರೆಯಲು ನನಗೆ ಇಷ್ಟವಿಲ್ಲ. ನನ್ನನ್ನು ಸೂಕ್ತ ರೀತಿಯಲ್ಲಿ ಪಕ್ಷ ನಡೆಸಿಕೊಂಡಿಲ್ಲ. ಇದರಿಂದ ನನಗೆ ಅವಮಾನ ಹಾಗೂ ಬೇಸರವಾಗಿದೆ ಎಂದು ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.


ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

Join Whatsapp
Exit mobile version