ರೈತ ಹೋರಾಟದಲ್ಲಿ ಭಾಗವಹಿಸಿದ್ದ ಪಂಜಾಬಿ ನಟ ದೀಪ್ ಸಿಧು ಅಪಘಾತದಲ್ಲಿ ಸಾವು

Prasthutha|

ಹರ್ಯಾಣ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಂಜಾಬಿ ನಟ ದೀಪ್ ಸಿಧು ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

- Advertisement -

ದೀಪ್ ಸಿಧು ಅವರು ಸಂಚರಿಸುತ್ತಿದ್ದ ಸ್ಕಾರ್ಪಿಯೋ ಕಾರು ಟ್ರಕ್’ವೊಂದರ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ

ರೈತರ ಪ್ರತಿಭಟನೆ ವೇಳೆ 2021ರ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ಟ್ರ್ಯಾಕ್ಟರ್ ರ್ಯಾಲಿ ಹಾಗೂ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸುವ ಸಂಚಿನಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿ 9ರಂದು ಸಿಧುರನ್ನು ಬಂಧಿಸಲಾಗಿತ್ತು.

Join Whatsapp