Home ಕ್ರೀಡೆ ನಾಯಕ ಮಯಾಂಕ್‌ ಅಗರ್‌ವಾಲ್‌ ಬದಲಾವಣೆ | ವದಂತಿಗಳಿಗೆ ತೆರೆ ಎಳೆದ ಪಂಜಾಬ್‌ ಕಿಂಗ್ಸ್‌

ನಾಯಕ ಮಯಾಂಕ್‌ ಅಗರ್‌ವಾಲ್‌ ಬದಲಾವಣೆ | ವದಂತಿಗಳಿಗೆ ತೆರೆ ಎಳೆದ ಪಂಜಾಬ್‌ ಕಿಂಗ್ಸ್‌

ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಸ್ಥಾನದಿಂದ ಮಯಾಂಕ್‌ ಅಗರ್‌ವಾಲ್‌ ಅವರನ್ನು ಕೈ ಬಿಡಲಾಗುತ್ತದೆ ಎಂದು ಹರಿದಾಡುತ್ತಿರುವ ಸುದ್ದಿಗಳಿಗೆ ಪಂಜಾಬ್‌ ಫ್ರಾಂಚೈಸಿ ಸ್ಪಷ್ಟನೆ ನೀಡಿದೆ. ಕಳೆದ ವಾರವಷ್ಟೇ ಕೋಚ್‌ ಸ್ಥಾನದಿಂದ ಅನಿಲ್‌ ಕುಂಬ್ಳೆ ಅವರನ್ನು ಬದಲಾಯಿಸುವ ತೀರ್ಮಾನ ಹೊರಬಿದ್ದಿತ್ತು. ಈ ಹಿನ್ನಲೆಯಲ್ಲಿ ಕೋಚ್‌ ಜೊತೆಗೆ ನೂತನ ನಾಯಕನನ್ನು ನೇಮಿಸಲಿದೆ ಎಂದು ವರದಿಯಾಗಿತ್ತು.

ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟನೆ ನೀಡಿರುವ ಪಂಜಾಬ್‌ ಕಿಂಗ್ಸ್‌ ಫ್ರಾಂಚೈಸಿ, ಈ ಕುರಿತ ವರದಿಗಳು ಸುಳ್ಳು ಎಂದು ಹೇಳಿದ್ದು,  ಆ ಮೂಲಕ ವದಂತಿಗಳಿಗೆ ತೆರೆ ಎಳೆದಿದೆ.

“ಪಂಜಾಬ್‌ ಕಿಂಗ್ಸ್‌ ಫ್ರಾಂಚೈಸಿಯ ನಾಯಕತ್ವಕ್ಕೆ ಸಂಬಂಧಿಸಿದ ವರದಿಗಳು ಕಳೆದ ಕೆಲ ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ಈ ವಿಷಯದ ಬಗ್ಗೆ ನಾವು ಯಾವುದೇ ಅಧಿಕೃತ ಹೇಳಿಕೆಯನ್ನು ಪ್ರಕಟಿಸಿಲ್ಲ,” ಎಂದು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ತಿಳಿಸುವ ಮೂಲಕ, ವದಂತಿಗಳಿಗೆ ಪಂಜಾಬ್ ಕಿಂಗ್ಸ್‌ ತೆರೆ ಎಳೆದಿದೆ.

ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಪಂಜಾಬ್‌ ಕಿಂಗ್ಸ್‌ ತಂಡ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿರಲಿಲ್ಲ. ಮತ್ತೊಂದೆಡೆ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಅಗರ್ವಾಲ್, ಟೂರ್ನಿಯಲ್ಲಿ ಒಟ್ಟು 196 ರನ್‌ ಗಳಿಸಲಷ್ಟೇ ಶಕ್ತರಾಗಿದ್ದರು.  ಕೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು.

2008ರಿಂದಲೂ ಐಪಿಎಲ್‌ನಲ್ಲಿ ಭಾಗವಹಿಸುತ್ತಿರುವ ಪಂಜಾಬ್‌ ಕಿಂಗ್ಸ್‌ ಇದುವರೆಗೂ ಚಾಂಪಿಯನ್‌ ಪಟ್ಟವನ್ನು ತನ್ನದಾಗಿಸಿಕೊಳ್ಳುವಲ್ಲಿ ವಿಫಲವಾಗಿದೆ. 2014ರಲ್ಲಿ ಫೈನಲ್‌ ಪ್ರವೇಶಿಸಿರುವುದು ತಂಡದ ಈವರೆಗಿನ ಅತ್ಯುತ್ತಮ ಸಾಧನೆಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್‌, ಪಂಜಾಬ್‌ ತಂಡವನ್ನು ಮೂರು ಎಸೆತಗಳು ಬಾಕಿ ಇರುವಂತೆಯೇ ರೋಚಕವಾಗಿ ಮಣಿಸಿತ್ತು.

Join Whatsapp
Exit mobile version