ಪುಂಜಾಲಕಟ್ಟೆ: ಕರ್ತವ್ಯದ ವೇಳೆ ಕುಸಿದು ಬಿದ್ದು ಅಂಗನವಾಡಿ ಸಹಾಯಕಿ ಮೃತ್ಯು

Prasthutha|

ಪುಂಜಾಲಕಟ್ಟೆ: ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಂಗನವಾಡಿ ಸಹಾಯಕಿಯೊಬ್ಬರು ಕುಸಿದು ಬಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಡಗ ಕಜೆಕಾರು ಗ್ರಾಮದ ಕೆದಿಮೇಲು ಎಂಬಲ್ಲಿ ನಡೆದಿದೆ.

- Advertisement -


ಮೃತರನ್ನು ಅಂಗನವಾಡಿ ಸಹಾಯಕಿ ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಎಂದು ಗುರುತಿಸಲಾಗಿದೆ.


ಮಧ್ಯಾಹ್ನ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಅಂಗನವಾಡಿ ಸಹಾಯಕಿ ವಸಂತಿ ನಾಯ್ಕ್ ಕುಸಿದು ಬಿದ್ದು ಅಸೌಖ್ಯಕ್ಕೀಡಾಗಿದ್ದರು. ಇವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

- Advertisement -


ಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

Join Whatsapp