ಯಾದಗಿರಿ: ರೈತ ಸಂಪರ್ಕ ಕೇಂದ್ರದ ಮುಂಭಾಗ ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೆಲಗಡಲೆ ಬೀಜ ಖರೀದಿಸಲು ಬಂದಿದ್ದ ಹಿರಿಯ ವಯಸ್ಸಿನ ಮಹಿಳೆಯೊಬ್ಬರನ್ನು ಮಹಿಳಾ ಸಬ್ ಇನ್ಸ್ ಪೆಕ್ಟರ್ ತಳ್ಳಿ ನೆಲಕ್ಕೆ ಬೀಳಿಸಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ನಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಮಹಿಳಾ ಸಬ್ ಇನ್ಸ್ ಪೆಕ್ಟರ್ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಬ್ ಇನ್ಸ್ ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ಕೇಳಿಬಂದಿದೆ.
ಮಹಿಳೆಯರು ರೈತ ಸಂಪರ್ಕ ಕೇಂದ್ರದ ಎದುರು ಸರತಿ ಸಾಲಿನಲ್ಲಿ ನಿಂತು ಬೀಜ ಖರೀದಿಸುತ್ತಿದ್ದರು. ಈ ವೇಳೆ ವೃದ್ಧ ಮಹಿಳೆ ಕೂಡ ನಿಂತಿದ್ದರು. ಏಕಾಏಕಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಬಂದು ಮಹಿಳೆಯನ್ನು ದೂಡು ಹಾಕುತ್ತಿರುವುದು ವೀಡಿಯೋದಲ್ಲಿದೆ.