ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಬೂತ್ ಮಟ್ಟದಿಂದ ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆಶಿ ಕಿವಿಮಾತು

- Advertisement -

ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

- Advertisement -

ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಡಿ.ಕೆ. ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮದ್ ಹ್ಯಾರಿಸ್ ನಲಪಾಡ್ ಅವರು ನೂತನ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಕರ್ನಾಟಕ ರಾಜ್ಯದಲ್ಲಿ 25 ಲಕ್ಷ ಯುವ ಕಾಂಗ್ರೆಸ್ ಸದಸ್ಯತ್ವ ಮಾಡಲಾಗಿದೆ ಎಂಬ ವರದಿ ಬಂದಿದೆ. ಇಲ್ಲಿ 15-20 ಸಾವಿರ ಸದಸ್ಯರು ಬಂದಿದ್ದೀರಿ. ಉಳಿದ ಸದಸ್ಯರು ಎಲ್ಲಿ ಹೋದರು ಎಂದು ಕೇಳಲು ಬಯಸುತ್ತೇನೆ. 25 ಲಕ್ಷ ಸದಸ್ಯತ್ವ ದೊಡ್ಡ ಮಟ್ಟದಲ್ಲಿ ತಾಲೂಕು ಮಟ್ಟದ ಅಧ್ಯಕ್ಷರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಇಂತಹುದೇ ಪದಗ್ರಹಣ ಕಾರ್ಯಕ್ರಮ ಮಾಡಬೇಕು. ಆ ಕಾರ್ಯಕ್ರಮಕ್ಕೆ ಆ ತಾಲೂಕಿನ ಯುವ ಕಾಂಗ್ರೆಸ್ ಸದಸ್ಯರನ್ನು ಆಹ್ವಾನಿಸಬೇಕು.

- Advertisement -

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸದಸ್ಯತ್ವ ಪಡೆದವರಿಂದ ಮತ ಹಾಕಿಸಿಕೊಂಡು ನಂತರ ಅವರನ್ನು ಬಿಡುವುದಲ್ಲ. ಸದಸ್ಯತ್ವ ಪಡೆದವರು ಕಾಂಗ್ರೆಸ್ ಪಕ್ಷದ ಲೆಕ್ಕದಲ್ಲಿರಬೇಕು. ಆಗ ಯಾರೆಲ್ಲಾ ನಿಜವಾದ ಸದಸ್ಯರು ಎಂಬುದು ತಿಳಿಯುತ್ತದೆ” ಎಂದು ತಿಳಿಸಿದರು.

ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ. ಇಂದು ನೀವೆಲ್ಲರೂ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳಿದ್ದೀರಿ. ನಿಮಗೆಲ್ಲರಿಗೂ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಪರವಾಗಿ ತುಬು ಹೃದಯದ ಶುಭಾಶಯ ಅರ್ಪಿಸಲು ಬಯಸುತ್ತೇನೆ.

ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ್ತಿನಿಂದ ಸಂಘಟನೆ ಮಾಡುತ್ತಾರೋ, ಕಾಂಗ್ರೆಸ್ ತತ್ವ ಸಿದ್ಧಾಂತ ಬೆಳೆಸಿಕೊಂಡು, ದೇಶದ ಸಮಗ್ರತೆ, ಐಕ್ಯತೆ ಕಾಪಾಡಿಕೊಂಡು ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತಿ ಕಾಪಾಡುವವರು ನಿಜವಾದ ನಾಯಕ. ಅವರೇ ನಿಜವಾದ ಕಾಂಗ್ರೆಸಿಗ” ಎಂದು ತಿಳಿಸಿದರು

- Advertisement -


Must Read

Related Articles