ಎರಡು ದಿನಗಳ ಕಾಲ ದೆಹಲಿ ಲಾಕ್ ಡೌನ್ ಮಾಡಿ: ಸುಪ್ರೀಂ ಕೋರ್ಟ್ ನ ಸಿಜೆಐ ಸಲಹೆ

Prasthutha|

ನವದೆಹಲಿ: ರಾಷ್ಟ್ರಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ತೀರಾ ಹದಗೆಟ್ಟ ಪರಿಣಾಮ ಎರಡು ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಸುಪ್ರೀಂ ಕೋರ್ಟ್ ನ ಸಿಜೆಐ ಎನ್ ವಿ ರಮಣ ಸಲಹೆ ನೀಡಿದ್ದಾರೆ.

- Advertisement -

ವಾಯುಮಾಲಿನ್ಯ ಕುರಿತ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಶನಿವಾರ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ 17 ವರ್ಷದ ವಿದ್ಯಾರ್ಥಿನಿ ಆದಿತ್ಯ ದುಬೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಳು. ಸುಪ್ರೀಂಕೋರ್ಟ್ ನ ಸಿಜೆಐ ಎನ್ ವಿ ರಮಣ ನೇತೃತ್ವದ ವಿಶೇಷ ಪೀಠದ ಜಸ್ಟೀಸ್ ಡಿವೈ ಚಂದ್ರಚೂಡ್ ಮತ್ತು ಜಸ್ಟೀಸ್ ಸೂರ್ಯಕಾಂತ್ ಅವರು ಇಂದು ಅರ್ಜಿಯ ವಿಚಾರಣೆ ನಡೆಸಿದರು.

ದೆಹಲಿಯಲ್ಲಿನ ವಾಯು ಗುಣಮಟ್ಟ ಸುಧಾರಿಸಲು ತಕ್ಷಣವೇ ಕೆಲವು ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸಲಹೆ ನೀಡಿದೆ. ಅಲ್ಲದೇ ಎರಡು ದಿನಗಳ ಕಾಲ ಲಾಕ್ ಡೌನ್ ಮಾಡುವ ಕುರಿತು ಚಿಂತನೆ ನಡೆಸಿ ಎಂದು ಸಿಜೆಐ ರಮಣ ಸಲಹೆ ನೀಡಿದ್ದಾರೆ.

- Advertisement -

ಸುಪ್ರೀಂಕೋರ್ಟ್ ಸಲಹೆಯ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.

Join Whatsapp