ವಾಷಿಂಗ್ಟನ್: ಉಕ್ರೇನ್ ವಿರದ್ಧ ಸಮರ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದೊಂದು ದಿನ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಎಚ್ಚರಿಕೆ ನೀಡಿದ್ದಾರೆ.
ಸ್ಟೇಟ್ ಆಫ್ ಯೂನಿಯನ್ ಉದ್ದೇಶಿಸಿ ಮಾತನಾಡಿದ ಜೋ ಬೈಡನ್, ರಷ್ಯಾದ ಸರ್ವಾಧಿಕಾರಿ ಬೇರೊಂದು ದೇಶ(ಯೂಕ್ರೇನ್)ವನ್ನು ಆಕ್ರಮಿಸಿದ್ದು, ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ವಿಶ್ವದಾದ್ಯಂತ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯೂರೋಪ್ ಅನ್ನು ಇಭ್ಭಾಗ ಮಾಡಬಹುದು ಎಂದು ಪುಟಿನ್ ತಿಳಿಸಿದ್ದಾರೆ. ಆದರೆ, ಅದು ತಪ್ಪು. ಪ್ರಜಾಪ್ರಭುತ್ವ ಮತ್ತು ನಿರಂಕುಶಪ್ರಭುತ್ವದ ನಡುವಿನ ಯುದ್ಧದಲ್ಲಿ ಪ್ರಜಾಪ್ರಭುತ್ವವೂ ಉದಯಿಸುತ್ತಿದೆ ಮತ್ತು ಇಡೀ ವಿಶ್ವವು ಶಾಂತಿ ಮತ್ತು ಭದ್ರತೆಯನ್ನು ಆಯ್ಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.