ಪುತ್ತೂರು: ಇಂದು (ಫೆಬ್ರವರಿ 5) ಪುತ್ತಿಲ ಪರಿವಾರದ ಸಮಾಲೋಚನೆ ಸಭೆ ನಡೆಯಲಿದ್ದು, ಅವರ ಬಿಜೆಪಿ ಸೇರ್ಪಡೆ ವಿಚಾರ ನಿರ್ಣಾಯಕವಾಗಲಿದೆ.
ಎರಡು ದಿನಗಳ ಹಿಂದೆಯಷ್ಟೆ ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತಿಲ ಬಿಜೆಪಿ ಸೇರ್ಪಡೆಗೆ ಷರತ್ತುಗಳನ್ನು ವಿಧಿಸಿದ್ದು, ಈ ನಡುವೆ ಫೆ.5ರಂದು ಮುಂದಿನ ನಡೆ ಬಗ್ಗೆ ಪುತ್ತಿಲ ಪರಿವಾರ ಪುತ್ತೂರಲ್ಲಿ ಸಭೆ ಏರ್ಪಡಿಸಿದೆ.
ಪುತ್ತಿಲ ಜತೆಗಿನ ಸಂಧಾನ ಮಾತುಕತೆಯನ್ನು ಒಂದು ಹಂತದಲ್ಲಿ ದಲ್ಲಿ ಬಿಜೆಪಿ ಕೈಬಿಟ್ಟಿತ್ತು. ಆದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಬಿಕ್ಕಟ್ಟು ಪರಿಹರಿಸಲು ರಾಜ್ಯ ನಾಯಕರು ಆಸಕ್ತಿ ತೋರಿಸಿದ್ದರು. ರಾಜ್ಯ ನಾಯಕರ ಸೂಚನೆ ಮೇರೆಗೆ ಸಂಘಪರಿವಾರ ಅಖಾಡಕ್ಕೆ ಇಳಿದಿತ್ತು. ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು ನೇತೃತ್ವದಲ್ಲಿ ಬಿಕ್ಕಟ್ಟು ಶಮನ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಷರತ್ತು ರಹಿತವಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಗೊಂಡಿದೆ. ಆದರೆ ಈ ಷರತ್ತನ್ನು ಪುತ್ತಿಲ ಪರಿವಾರ ಸಮ್ಮತಿಸುತ್ತದೆಯೇ ಅಥವಾ ಇಲ್ಲವೇ ಎನ್ನುವುದು ಇಂದಿನ ಸಭೆಯಲ್ಲಿ ತೀರ್ಮಾನವಾಗಲಿದೆ.