ಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳ ಹೆಸರಿನ ಕಮಾನು ಹಾಕಿರುವುದು ಮಂಡ್ಯ ಮಾತ್ರವಲ್ಲ ರಾಜ್ಯದ ಜನತೆಗೆ ಮಾಡಿರುವ ಅವಮಾನ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ‌ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಮುಖ್ಯಮಂತ್ರಿಯವರು  ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

- Advertisement -

  ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಈ ಕಮಾನಿಗೆ ಸಮಾಜದ ಎಲ್ಲಾ ವರ್ಗಗಳಿಂದಲೂ ವಿರೋಧ ವ್ಯಕ್ತವಾಗಿದೆ.

Join Whatsapp
Exit mobile version