ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳು ಠಾಣೆಗೆ ಶರಣು

Prasthutha|

- Advertisement -

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಬನ್ನೂರು ನಿವಾಸಿ ಮನೀಷ್, ಚೇತು ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.

- Advertisement -

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.



Join Whatsapp