Home ಟಾಪ್ ಸುದ್ದಿಗಳು ಪುತ್ತೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ

ಪುತ್ತೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ

ಪುತ್ತೂರು: ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಮುರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.

ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದೆ. ಅನಾಹುತ ಆದ ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲೆಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ಯತ್ನ ಮಾಡಿದ್ದಾರೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

Join Whatsapp
Exit mobile version