ಪುತ್ತೂರು: 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು

Prasthutha|

ಪುತ್ತೂರು: ಬೊಳುವಾರು ವಸತಿ ಸಮುಚ್ಚಯದ 5ನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತಪಟ್ಟಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

- Advertisement -


9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಮೃತ ಬಾಲಕ ಎಂದು ಗುರುತಿಸಲಾಗಿದೆ.


ಸುಶಾನ್ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಯಕ್ಕೆ ಹೋಗಿದ್ದಾನೆ. ಬಳಿಕ ಸಮುಚ್ಚಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಾಲಕನನ್ನು ಕಂಡ ಸ್ಥಳೀಯರು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಸುಶಾನ್ ರೈ ಮೃತಪಟ್ಟಿದ್ದಾನೆ.

- Advertisement -


ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp