ಪುತ್ತೂರು: ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಆಸ್ಪತ್ರೆ ಮುಂದೆ ಪ್ರತಿಭಟನೆ

Prasthutha|

ಪುತ್ತೂರು: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಪುತ್ತೂರಿನ ಖಾಸಗಿ ಆಸ್ಪತ್ರೆ ಎದುರು ಧರಣಿ ನಡೆಸಿದರು.

- Advertisement -

ಮೃತ ಬಾಲಕನನ್ನು ಸುಳ್ಯದ ಕಸಬಾ ಗ್ರಾಮದ ಶ್ರೀಜಿತ್ (17) ಎಂದು ಗುರುತಿಸಲಾಗಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಚಿಕಿತ್ಸೆಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಆತನಿಗೆ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಗೆ ಸ್ಪಂದಿಸದ ಕಾರಣ ಮಾರ್ಗಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಆ.14ರಂದು ನಡೆದ ಬಾಲಕನ ಸಾವಿಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಜಿ.ಶಿವಶಂಕರ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಮನವಿ ಪತ್ರ ಸ್ವೀಕರಿಸಿದರಲ್ಲದೇ ಧರಣಿನಿರತರನ್ನು ಮನ ವೊಲಿಸಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನ ಹಿಂಪಡೆದರು.



Join Whatsapp