ಪುತ್ತೂರು | ಬಸ್- ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Prasthutha|

ಪುತ್ತೂರು: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ.

- Advertisement -

ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Join Whatsapp