Home ಟಾಪ್ ಸುದ್ದಿಗಳು ಪುತ್ತೂರು | ಕಾರು-ಟಿಪ್ಪರ್ ನಡುವೆ ಅಪಘಾತ: ನಾಲ್ವರು ಗಂಭೀರ

ಪುತ್ತೂರು | ಕಾರು-ಟಿಪ್ಪರ್ ನಡುವೆ ಅಪಘಾತ: ನಾಲ್ವರು ಗಂಭೀರ

ವಿಟ್ಲ: ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ.


ಗಾಯಗೊಂಡವರು ಮುಂಬೈ ಮೂಲದವರೆಂದು ಹೇಳಲಾಗುತ್ತಿದೆ.


ಕಾರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Join Whatsapp
Exit mobile version