ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ನಡೆದಿದೆ.
ಆನಂದ ಎಂಬವರ ಪುತ್ರ ರಿತೇಶ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ರಿತೇಶ್ ತನ್ನ ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.