Home ಕರಾವಳಿ ಪುತ್ತೂರು: ಮರದ ದಿಮ್ಮಿ ಮೈಮೇಲೆ ಬಿದ್ದು ಕಾಂಗ್ರೆಸ್ ಮುಖಂಡ ಸಾವು

ಪುತ್ತೂರು: ಮರದ ದಿಮ್ಮಿ ಮೈಮೇಲೆ ಬಿದ್ದು ಕಾಂಗ್ರೆಸ್ ಮುಖಂಡ ಸಾವು

ಪುತ್ತೂರು: ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಪುತ್ತೂರಿನ ಸುಳ್ಯಪದವು ಎಂಬಲ್ಲಿ ನಡೆದಿದೆ.


ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.


ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದು, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಗೋಪಾಲಕೃಷ್ಣ ಅವರು ಪಡುವನೂರು ಗ್ರಾಮದ ಸುಳ್ಳಪದವು ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

Join Whatsapp
Exit mobile version