Home ಕರಾವಳಿ ಪುತ್ತೂರು | ದಲಿತ ಯುವತಿ ಕೊಲೆ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ಪುತ್ತೂರು | ದಲಿತ ಯುವತಿ ಕೊಲೆ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಮನೆಯಲ್ಲಿ ಅಡುಗೆ ಕೆಲಸದಲ್ಲಿ ನಿರತಳಾಗಿದ್ದ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.


ಸುಳ್ಯದ ಕನಕಮಜಲು ನಿವಾಸಿ ಉಮೇಶ್ ಬಂಧಿತ ಆರೋಪಿ. ಕೊಲೆಗೀಡಾದ ಯುವತಿ ಜಯಶ್ರೀ ಮತ್ತು ಉಮೇಶ್ ನಡುವೆ ಪ್ರೀತಿಯಿತ್ತು. ಆದರೆ ಉಮೇಶನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಸಂಬಂಧ ಕಡಿದುಕೊಂಡಿದ್ದಳು ಎನ್ನಲಾಗಿದೆ. ಇದೇ ದ್ವೇಷದಿಂದ ಜಯಶ್ರೀಯನ್ನು ಚೂರಿಯಿಂದ ಇರಿದು ಆರೋಪಿ ಉಮೇಶ್ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.


ಮಂಗಳವಾರ ಮಧ್ಯಾಹ್ನ ಜಯಶ್ರೀ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಉಮೇಶ್ ಮನೆಗೆ ಏಕಾಏಕಿ ನುಗ್ಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸಮೀಪದ ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದ ದೇವಕಿ ಅವರು ಶಬ್ದ ಕೇಳಿ ಓಡಿ ಬಂದಾಗ ಮಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡಿದೆ. ತಕ್ಷಣ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಳು.

Join Whatsapp
Exit mobile version