ಪುತ್ತೂರು: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ