ಪುತ್ತೂರು: ಹಿಂದೂಗಳಿಗೆ ಮಾತ್ರ ಪಾರ್ಕಿಂಗ್| ವಿವಾದಕ್ಕೆ ಕಾರಣವಾದ ಫ್ಲೆಕ್ಸ್

Prasthutha|

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಅವಕಾಶ ಎಂದು ಫ್ಲೆಕ್ಸ್ ಹಾಕಲಾಗಿದ್ದು, ಈ ಫ್ಲೆಕ್ಸ್ ಗೆ ಭಾರಿ ವಿರೋಧ ವ್ಯಕ್ತವಾಗಿದೆ.

- Advertisement -

ದೇವಾಲಯ ಮುಂಭಾಗದ ದೇವರಮಾರು ಗದ್ದೆಯಲ್ಲಿ ಇನ್ನು ಮುಂದೆ ಹಿಂದು ಭಕ್ತರ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ.

ಈ ಹಿಂದೆಯೂ ಹಿಂದು ಸಂಘಟನೆಗಳು ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶವನ್ನು ನೀಡಿರಲಿಲ್ಲ.  ಈಗ ಅನ್ಯಧರ್ಮದವರಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನೂ ಸಮಿತಿ ನಿಷೇಧಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Join Whatsapp