ಪುತ್ತೂರು | ನಾಳೆ ಗೃಹ ಜ್ಯೋತಿ ಯೋಜನೆಗೆ ಚಾಲನೆ

Prasthutha|

ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ.

- Advertisement -

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ ಸಚಿವರಾದ ಕೆ.ಜೆ. ಚಾರ್ಜ್ ಗೌರವ ಉಪಸ್ಥಿತಿ ವಹಿಸುವರು. ಪುತ್ತೂರು  ಶಾಸಕರಾದ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ ಭಾಗವಹಿಸುವರು.

Join Whatsapp