ಪುತ್ತೂರು: ಸಂಘಪರಿವಾರದ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಆರೋಪಿಯನ್ನು ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ.
ಅರ್ಯಾಪು ನಿವಾಸಿ ಚರಣ್ ( 28) ಮೃತ ಯುವಕ. ಈತ ಕಾರ್ತಿಕ್ ಮೇರ್ಲ ಹತ್ಯೆಯ ಮೂರು ಆರೋಪಿಗಳ ಪೈಕಿ ಓರ್ವನಾಗಿದ್ದಾನೆ.
ಚರಣ್ ಮಾಲಕತ್ವದಲ್ಲಿ ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ನಾಳೆ ಶುಭಾರಂಭ ನಡೆಯಲಿದ್ದು, ಅಂಗಡಿಗೆ ಬೇಕಾದ ಸಾಮಾನು ಸರಂಜಾಮು ಜೋಡಿಸುವ ಕಾರ್ಯದಲ್ಲಿ ಚರಣ್ ತೊಡಗಿಸಿಕೊಂಡಿದ್ದನು. ಇಂದು ಸಂಜೆಯ ವೇಳೆ ಎರಡು ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್ ನಿಂದ ಚರಣ್ ನನ್ನು ಹತ್ಯೆ ಮಾಡಿದ್ದಾರೆ.
2019ರ ಸೆ. 4 ರಂದು ರಾತ್ರಿ 10 ಗಂಟೆ ಸುಮಾರಿಗೆ ಗಣೇಶೋತ್ಸವದ ಪೆಂಡಾಲ್ ನಲ್ಲಿ ಕಾರ್ತಿಕ್ ಮೇರ್ಲ ಹತ್ಯೆ ಮಾಡಲಾಗಿತ್ತು.