Home ಟಾಪ್ ಸುದ್ದಿಗಳು ಪುತ್ತೂರು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ.


ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ . ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version