ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎಂದು ನೊಂದ ಕಾಲೇಜು ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ(17) ಮೃತ ವಿದ್ಯಾರ್ಥಿನಿ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದಳು.
ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ ಬಹುಮಾನ ಸಿಕ್ಕಿರಲಿಲ್ಲ. ಇದರಿಂದಾಗಿ ನಿರೀಕ್ಷೆಭಂಗಗೊಂಡು ಬೇಸರಗೊಂಡಿದ್ದ ನಿಶಾ ಮನೆಗೆ ಬಂದು ಖಿನ್ನತೆಗೀಡಾಗಿದ್ದಳು ಎಂದುಮನೆಯವರು ತಿಳಿಸಿದ್ದಾರೆ.
ತೀವ್ರ ವಾಂತಿ ಮಾಡುತ್ತಾ ನರಳುತ್ತಿದ್ದ ನಿಶಾಳನ್ನು ಮನೆಯವರು ವಿಚಾರಿಸಿದಾಗ ಕ್ರಿಷಿ ಕೀಟನಾಶಕ ಸೇವಿಸಿ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವನ್ನು ಮನಗಂಡ ಪುತ್ತೂರಿನ ಆಸ್ಪತ್ರೆಯ ವೈದ್ಯರು ಮಂಗಳೂರಿಗೆ ಕೊಂಡೊಯ್ಯುವಂತೆ ತಿಳಿಸಿದ್ದಾರೆ. ಅದರಂತೆ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ