ಪುತ್ತೂರು | ಕಾರು, ದ್ವಿಚಕ್ರ ವಾಹನದ ನಡುವೆ ಅಪಘಾತ: ಓರ್ವ ಮೃತ್ಯು

Prasthutha|

ಪುತ್ತೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ.

- Advertisement -


ನೈತಾಡಿಯ ಇಸ್ಮಾಯಿಲ್ ಯಾನೆ ಉಸ್ಮಾನ್ (58) ಮೃತ ವ್ಯಕ್ತಿ.


ಅಡಿಕೆ ವ್ಯಾಪಾರಸ್ಥರಾಗಿರುವ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರಾಗಿದ್ದಾರೆ.

- Advertisement -


ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.