ಪುತ್ತೂರು ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎನ್. ಸುಧಾಕರ್ ಶೆಟ್ಟಿ ನಿಧನ: SDPI ಸಂತಾಪ

Prasthutha|

ಪುತ್ತೂರು: ಕಿಲ್ಲೆ ಮೈದಾನದಲ್ಲಿ ದೇವತಾ ಸಮಿತಿಯ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವದ ರೂವಾರಿ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಮಾಜಿ ಸಂಚಾಲಕರು ನನ್ನ ಆತ್ಮೀಯ ಮಿತ್ರರು ಆಗಿದ್ದ ಎನ್ ಸುಧಾಕರ ಶೆಟ್ಟಿಯವರು ಅಲ್ಪಸಮಯದ ಅನಾರೋಗ್ಯದಿಂದ ನಿನ್ನೆ ಮರಣ ಹೊಂದಿದ ವಾರ್ತೆಯು ಅತೀವ ನೋವನ್ನು ಉಂಟುಮಾಡಿದೆ, ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ತಿಳಿಸಿದ್ದಾರೆ.

- Advertisement -

ಕಿಲ್ಲೆ ಮೈದಾನದಲ್ಲಿ ದೇವತಾ ಸಮಿತಿಯ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ  ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಳೆದ 44 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸಿಕೊಂಡು ರಾಜಕೀಯ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದ ವ್ಯಕ್ತಿಯಾಗಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಸೃಷ್ಟಿಕರ್ತನು ಇವರ ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ತಮ್ಮ ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp