ಪುತ್ತೂರು: ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಕೆಯ್ಯರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಗಳ ಪುತ್ರಿ ಶೃತಿ ಸಿ.ರೈ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಶೃತಿ ಅವರು ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಅಲ್ಲಿಯೇ ವಾಸ್ತವ್ಯ ಹೊಂದಿದ್ದರು ಎನ್ನಲಾಗಿದೆ. ಎ .30 ರಂದು ತನ್ನ ರೂಮ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.