ಪುತ್ತೂರು| ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

Prasthutha|

ಪುತ್ತೂರು: ಕರ್ನಾಟಕ,ಕೇರಳ ದ ಹಲವು ಕಡೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

- Advertisement -

ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಅಶ್ರಫ್ ಯಾನೆ ಮನ್ಸೂರ್(42) ಮತ್ತು ಸಾಲ್ಮರ ಕೆರೆಮೂಲೆ ಗುಂಪಕಲ್ಲು ನಿವಾಸಿ ಮಹಮ್ಮದ್ ಸಲಾಂ(32) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತ ಆರೋಪಿಗಳಿಂದ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ , ಕಳ್ಳತನಕ್ಕೆ ಬಳಸಿದ ಬೈಕ್ ಸಹಿತ ಒಟ್ಟು ರೂ. 6.5ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

- Advertisement -

ಫೆಬ್ರವರಿ 26ರಂದು ರಾತ್ರಿ ವೇಳೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜುರು ಪಾದೆ ನಿವಾಸಿ ಶಿವಪ್ರಸಾದ್ ಎಂಬವರ ಮನೆಯ ಬೀಗ ಮುರಿದು ಸುಮಾರು 160 ಗ್ರಾಂ ಚಿನ್ನಾಭರಣ ಕಳವು ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp
Exit mobile version