ಪುತ್ತೂರು| ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ : ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

Prasthutha|

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಮೃತ ಯುವಕನಾಗಿದ್ದು, ಅವರು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

- Advertisement -

ಮೃತ ಅಬ್ದುಲ್ ನಾಸಿರ್ ವಿಡಿಯೋ ಮೂಲಕ ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.

“ನಾನು ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಅದ್ರಾಮ ಮತ್ತು ಕುಟುಂಬದವರು ಸೇರಿ ಹಲ್ಲೆ ನಡೆಸಿದ್ದಾರೆ” ಎಂದು ನಾಸೀರ್ ವಿಡಿಯೋ ಮಾಡಿ ಆರೋಪಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ್ದರು.

- Advertisement -

ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Join Whatsapp