ಪುತ್ತೂರು: ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು(ಎಸಿ) ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಖಾಸಗಿ ಸಂಸ್ಥೆಯೊಂದಕ್ಕೆ ಬೀಗ ಜಡಿದ ಘಟನೆ ನಡೆದಿದೆ.
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದ ಸಮೀಪ , ಎಸ್ ಬಿ ಐ ಬ್ಯಾಂಕಿನ ಮುಂಭಾಗ ಕಾರ್ಯಚರಿಸುತ್ತಿರುವ ಮೇದಿನಿ ಜನಸೇವಾ ಕೇಂದ್ರಕ್ಕೆ ದಾಳಿ ನಡೆಸಿದ ಸಹಾಯ ಆಯುಕ್ತರು ಕಚೇರಿಗೆ ಬೀಗ ಜಡಿದಿದ್ದಾರೆ.
ಸರಕಾರದ ಅನುಮತಿಯಿಲ್ಲದೆ ಯಾವುದೇ ಖಾಸಗಿ ಸಂಸ್ಥೆಗಳು ವೋಟರ್ ಐಡಿ ಕಾರ್ಡ್ ಗಳನ್ನು ಡೌನ್ ಲೋಡ್ ಯಾ ಮುದ್ರಿಸಿ ಕೊಡುವಂತಿಲ್ಲ ಎಂಬ ನಿಯಮಗಳಿದ್ದು, ಅದನ್ನು ಉಲ್ಲಂಘಿಸಿ ಮೇದಿನಿಯು ವೋಟರ್ ಐಡಿ ಕಾರ್ಡ್ ಮುದ್ರಿಸಿ ಕೊಟ್ಟಿರುವ ಬಗ್ಗೆ ಸಹಾಯಕ ಆಯುಕ್ತರಿಗೆ ದೂರುಗಳು ಬಂದಿದ್ದವು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.