ಪುತ್ತೂರು| ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Prasthutha|

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ.


ನಬೀಸ ಎಂಬವರು ಮೃತ ಮಹಿಳೆ. ನಿನ್ನೆ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ನಬೀಸ ಇಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -


ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ನಬೀಸ ಅವರು ಸ್ವತಃ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.


ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಪೊಲೀಸರು, ತನಿಖೆ ನಂತರವಷ್ಟೇ ಸಾವಿಗೆ ನಿಖರ ಕಾರಣಗಳು ತಿಳಿಯಲಿವೆ ಎಂದು ಹೇಳಿದ್ದಾರೆ.

- Advertisement -