ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ.
ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ. ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಾಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಪದ್ಮರಾಜ್ ಚಾಕುವಿನಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಬಳಿಕ ಬೈಕನ್ನು ಘಟನಾ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.